ಬೆಳ್ಳಾರೆಯಲ್ಲಿ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ

0

 

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ,ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಪ್ರಾಥಮಿಕ ಇವರ ಆಶ್ರಯದಲ್ಲಿ ಬೆಳ್ಳಾರೆ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗಗಳ ಬಾಲಕ,ಬಾಲಕಿಯರ ಕ್ರೀಡಾಕೂಟವು ನ.04 ರಂದು ಕೆ.ಪಿ.ಎಸ್.ಕ್ರೀಡಾಂಗಣದಲ್ಲಿ ನಡೆಯಿತು.

 


ಕ್ರೀಡಾಕೂಟ ಸಂಘಟನಾ ಸಮಿತಿ ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್.ರೈ. ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಗೌಡ ಪಿ,ಉಪಪ್ರಾಂಶುಪಾಲೆ ಉಮಾಕುಮಾರಿ , ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಶ್ರೀನಾಥ ರೈ ಬಾಳಿಲ, ಕ್ಷೇತ್ರ ಸಮನ್ವಯಾಧಿಕಾರಿ ಶೀತಲ್ ಯು.ಕೆ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ, ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷೆ ಅನಿಲ್ ರೈ ಚಾವಡಿಬಾಗಿಲು, ಕಟ್ಟಡ ಸಮಿತಿ ಅಧ್ಯಕ್ಷ ಹರ್ಷ ಜೆ,ಮುಖ್ಯ ಗುರು ಮಾಯಿಲಪ್ಪ,ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ವಸಂತ ಏನೆಕಲ್,ಶ್ರೀಮತಿ ಸವಿತಾ ಉಪಸ್ಥಿತರಿದ್ದರು.
ಶಿಕ್ಷಕ ದಿನೇಶ್ ಮಾಚಾರ್ ಸ್ವಾಗತಿಸಿ,ಶಿಕ್ಷಕ ರಾಮಚಂದ್ರ ಭಟ್ ವಂದಿಸಿದರು.