ಗುತ್ತಿಗಾರಿನಲ್ಲಿ ಅಡಿಕೆ ಎಲೆ ಚುಕ್ಕೆ ರೋಗ ಹಾಗೂ ನಿರ್ವಹಣೆ ಬಗ್ಗೆ ಮಾಹಿತಿ

0

 

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ತೋಟಗಾರಿಕಾ ಇಲಾಖೆ, ಪರಿವಾರ ಪಂಜ ರೈತ ಉತ್ಪಾದಕ ಕಂಪೆನಿ. ಲಿ ಸಹಯೋಗದಲ್ಲಿ ಅಡಿಕೆ ಎಲೆ ಚುಕ್ಕಿ ರೋಗ ಹಾಗೂ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮ ನ.5 ರಂದು ಸೊಸೈಟಿಯ ದೀನ್ ದಯಾಳ್ ರೈತ ಸಭಾಭವನದಲ್ಲಿ ನಡೆಯಿತು. ಸೊಸೈಟಿಯ ಅಧ್ಯಕ್ಷ ವೆಂಕಟ್ ದಂಬೆಕೋಡಿ ಅಧ್ಯಕ್ಷತೆ ವಹಿಸಿದ್ದರು.


ಮೀನುಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ಎ.ವಿ ತೀರ್ಥರಾಮ ದೀಪ ಬೆಳಗಿಸಿ ಉದ್ಘಾಟಿಸಿದರು.
ವಿಟ್ಲ ಸಿ ಪಿ ಸಿ ಆರ್ ಐ ನ ವಿಜ್ಞಾನಿ ಡಾ.ಭವಿಷ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅಡಿಕೆ ಎಲೆ ಚುಕ್ಕೆ ರೋಗ ಹಾಗೂ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಭಾರತೀಯ ರಬ್ಬರ್ ಭೊರ್ಡ್ ಸದಸ್ಯ ಮುಳಿಯ ಕೇಶವ, ಗುತ್ತಿಗಾರು ಸಹಕಾರ ಸಂಘದ ಉಪಾಧ್ಯಕ್ಷ ಕಿಶೋರ್ ಕುಮಾರ್ ಅಂಬೆಕಲ್ಲು, ಗುತ್ತಿಗಾರು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ರೇವತಿ ಅಚಳ್ಳಿ, ದೇವಚಳ್ಳ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸುಲೋಚನಾ ದೇವ, ಪರಿವಾರ ಪಂಜ ರೈತ ಉತ್ಪಾದಕ ಕಂಪೆನಿ ಅಧ್ಯಕ್ಷ ತೀರ್ಥಾನಂದ ಕೊಡೆಂಕಿರಿ, ಸುಳ್ಯ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕರು ಶ್ರೀಮತಿ ಸುಹಾನ ಉಪಸ್ಥಿತರಿದ್ದರು. ಕರುಣಾಕರ ಸಾಲ್ತಾಡಿ ಪ್ರಾರ್ಥಿಸಿದರು. ಶ್ರೀಮತಿ ಸುಹಾನ ಅವರು ಸ್ವಾಗತಿಸಿ, ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಎ.ಕೆ ವಂದಿಸಿದರು. ಕಿಶೋರ್ ಕುಮಾರ್ ಬೊಮ್ಮದೆರೆ ಪೈಕ ಹಾಗೂ ವಿನೋದ್ ಬೊಳ್ಮಲೆ ಕಾರ್ಯಕ್ರಮ ನಿರೂಪಿಸಿದರು.