ಹೋಬಳಿ ಮಟ್ಟದ ಕ್ರೀಡಾಕೂಟ ; ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

0

 

 

ಅ. 5ರಂದು ಬೆಳ್ಳಾರೆಯಲ್ಲಿ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ ಲಭಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. 14ರ ವಯೋಮಾನದ ಬಾಲಕರ ತಂಡ ಪ್ರಶಸ್ತಿ, ಬಾಲಕ ಬಾಲಕಿಯರ ಸಮಗ್ರ ಪ್ರಶಸ್ತಿ, 17ರ ವಯೋಮಾನದ ಬಾಲಕರ ತಂಡ ಪ್ರಶಸ್ತಿ, ಬಾಲಕಿಯರ ತಂಡ ಪ್ರಶಸ್ತಿ ಮತ್ತು ಬಾಲಕ ಬಾಲಕಿಯರ ಸಮಗ್ರ ಪ್ರಶಸ್ತಿ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿದೆ.