ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ತುಳಸಿ ಪೂಜೆ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನಿರಂತರ ಒಂದು ತಿಂಗಳ ಕಾಲ ಕಾರ್ತೀಕ ಪೂಜೆ ನಡೆಯುತ್ತಿದ್ದು ನ.05 ರಂದು ಕಾರ್ತಿಕ ಪೂಜೆಯ ನಂತರ ತುಳಸಿ ಪೂಜೆ ಕಾರ್ಯಕ್ರಮವು ನಡೆಯಿತು. 

ಕಾರ್ಯಕ್ರಮದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಆಡಳಿತ ಮಂಡಳಿ ಸಮಿತಿ ಸದಸ್ಯರು, ಸೇವಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.