ಕೆ.ವಿ.ಜಿ.ಪಾಲಿಟೆಕ್ನಿಕ್ : ಶಾಶ್ವತ್ ಗೆ ರ್ಯಾಂಕ್ ಪ್ರದಾನ

0

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿಯಾಗಿ ಕಳೆದ ಸಾಲಿನ ಅಂತಿಮ ಪರಿಕ್ಷೆಯಲ್ಲಿ ಮೂರನೇ ರ್ಯಾಂಕ್ ಗಳಿಸಿದ ಶಾಶ್ವತ್ ಕೆ.ಎಸ್ ರವರಿಗೆ
ಬೆಂಗಳೂರು ವಿಧಾನ ಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆದ ನಾಲ್ವಡಿ ಕ್ರಷ್ಣರಾಜ ಒಡೆಯರ್ ಘಟಿಕೋತ್ಸವ 2022 ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ.ಪ್ರದೀಪ್ ಕಂಚಿನ ಪದಕ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಎ.ಓ.ಎಲ್.ಇ.ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾಪ್ರಸಾದ್ ಕೆ.ವಿ, ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ್ ಕೆ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥ ಪ್ರದೀಪ್ ಎಮ್ ಉಪಸ್ಥಿತರಿದ್ದರು.