ಸುಳ್ಯ: ಕಾಮಗಾರಿಗಳ ವೈಜ್ಞಾನಿಕ ಯೋಜನಾ ವರದಿ (DPR) ತಯಾರಿಸುವ ಬಗ್ಗೆ ತರಬೇತಿ ಕಾರ್ಯಾಗಾರ

0

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ ಇದರ‌ ಸಹಯೋಗದಲ್ಲಿ ಸುಳ್ಯ ತಾಲೂಕು ಪಂಚಾಯತ್‌ನ ಮಿನಿ ಸಭಾಂಗಣದಲ್ಲಿ ನ. 02ರಂದು ಮಹಾತ್ಮಗಾಂಧಿ ನರೇಗಾ ಯೋಜನೆಯ `ಜಲ ಸಂಜೀವಿನಿʼ ಕಾರ್ಯಕ್ರಮದಡಿ ಜಿಯೋ ಸ್ಪೇಷಿಯಲ್‌ ತಂತ್ರಜ್ಞಾನಗಳನ್ನು ಬಳಸಿಕೊಂಡು ನೈಸರ್ಗಿಕ ಸಂಪನ್ಮೂಲ ನಿರ್ವಹಣೆ(NRM) ಕಾಮಗಾರಿಗಳ ವೈಜ್ಞಾನಿಕ ಯೋಜನಾ ವರದಿ (DPR) ತಯಾರಿಸಿ ಮತ್ತು ಅನುಷ್ಠಾನಗೊಳಿಸುವ ಬಗ್ಗೆ ತರಬೇತಿ ಕಾರ್ಯಗಾರ ನಡೆಯಿತು.


ಎರಡು ದಿನಗಳ ತರಬೇತಿಯನ್ನು ಸುಳ್ಯ ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಎನ್‌ ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಪಂಚಾಯತ್ ನ ಸಹಾಯಕ ನಿರ್ದೇಶಕಿ (ಗ್ರಾ.ಉ.) ಶ್ರೀಮತಿ ಸರೋಜಿನಿ ಬಿ,‌ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ನಾಗರಾಜ್‌, ದ.ಕ ಜಿಲ್ಲಾ ಪಂಚಾಯತ್‌ ನ ಸಹಾಯಕ ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಕಿಶನ್‌ ರಾವ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅನುಷ್ಠಾನ ಇಲಾಖಾಧಿಕಾರಿಗಳು,ಗ್ರಾಮ ಪಂಚಾಯತ್ ಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಪಂಚಾಯತ್ ಡಾಟಾ ಎಂಟ್ರಿ ಅಪರೇಟರ್ ಗಳು, ಗ್ರಾಮ ಕಾಯಕ ಮಿತ್ರರು, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕ ಅಭಿಯಂತರರು, ತಾಲೂಕು ಎಂಐಎಸ್, ಐಇಸಿ ಸಂಯೋಜಕರು, ತಾಂತ್ರಿಕ ಸಹಾಯಕರು, ಆಡಳಿತ ಸಹಾಯಕರು ಉಪಸ್ಥಿತರಿದ್ದರು.