ಬೆಳ್ಳಾರೆ ಜ್ಞಾನದೀಪದಲ್ಲಿ ಉಚಿತ ಕಂಪ್ಯೂಟರ್ ಶಿಕ್ಷಕಿಯರ ತರಬೇತಿಗೆ ಅರ್ಜಿ ಆಹ್ವಾನ

0

ಜ್ಞಾನದೀಪ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್(ರಿ)ಬೆಳ್ಳಾರೆ ಇದರ ವತಿಯಿಂದ 2022-23ನೇ ಸಾಲಿನಲ್ಲಿ ತಾಲೂಕಿನ ಅರ್ಹ ಬಡ ನಿರುದ್ಯೋಗಿ ಯುವತಿಯರಿಗೆ ಸುಳ್ಯದ ಶ್ರೀಹರಿ ವಾಣಿಜ್ಯ ಸಂಕೀರ್ಣ ಮತ್ತು ಬೆಳ್ಳಾರೆಯ ಬಸ್ ನಿಲ್ದಾಣದ ಬಳಿ ಕಾರ್ಯನಿರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಒಂದು ವರ್ಷದ ಉಚಿತ ಡಿಪ್ಲೊಮಾ ಇನ್ ಕಂಪ್ಯೂಟರ್ ಟೀಚರ್ ಟ್ರೈನಿಂಗ್ ಕೋರ್ಸ್ ಗೆ ಅರ್ಜಿ ಆಹ್ವಾನಿಸಲಾಗಿದೆ .


ವಾಣಿಜ್ಯ ದಲ್ಲಿ ಪದವಿ ಪೂರೈಸಿರುವ ಸುಳ್ಯ ತಾಲೂಕಿನ ಅರ್ಹ ಬಡ ವಿದ್ಯಾರ್ಥಿನಿಯರಿಗೆ ಒಂದು ವರ್ಷ ಉಚಿತವಾಗಿ ಈ ತರಬೇತಿ ನೀಡಿ‌ ಸರಕಾರದ ಮಾನ್ಯತೆಯ ಪ್ರಮಾಣಪತ್ರ ನೀಡಲಾಗುತ್ತದೆ. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದವರು ಶಾಲೆ,ಕಾಲೇಜು ಅಥವಾ ಕಂಪ್ಯೂಟರ್ ಶಿಕ್ಷಣ ಸಂಸ್ಥೆ ಗಳಲ್ಲಿ ಕಂಪ್ಯೂಟರ್ ಶಿಕ್ಷಕಿಯರುಗಳಾಗಿ ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ .ಆಸಕ್ತರು ನವೆಂಬರ್ 30ರ ಮೊದಲು ತಮ್ಮ ಸ್ವ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಆಧಾರ್ ಕಾರ್ಡ್,ರೇಶನ್ ಕಾರ್ಡ್,ಆದಾಯ ಪ್ರಮಾಣ ಪತ್ರದ ಪ್ರತಿಗಳೊಂದಿಗೆ ಅಧ್ಯಕ್ಷರು /ನಿರ್ದೇಶಕರು‌ ಜ್ಞಾನದೀಪ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ (ರಿ)ಶ್ರೀ ದುರ್ಗಾ ಕಾಂಪ್ಲೆಕ್ಸ್ ,ಬಸ್ ನಿಲ್ದಾಣದ ಎದುರು ಬೆಳ್ಳಾರೆ,ಸುಳ್ಯ ತಾಲೂಕು 574212 ಇಲ್ಲಿಗೆ ಸಲ್ಲಿಸಬಹುದೆಂದು ಟ್ರಸ್ಟ್ ನ ಪ್ರಕಟನೆ ತಿಳಿಸಿದೆ .