ಲೈಂಗಿಕ ದೌರ್ಜನ್ಯ ಪ್ರಕರಣ ಸಮಾಜಕ್ಕೆ ಅಂಟಿದ ದೊಡ್ಡ ಪಿಡುಗು : ನವೀನ್ ಚಂದ್ರ ಜೋಗಿ

0

ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ಕಾಣುತ್ತಿದೆ. ಈ ಪ್ರಕರಣಗಳು ಸಮಾಜಕ್ಕೆ ಅಂಟಿರುವ ದೊಡ್ಡ ಪಿಡುಗಾಗಿ ಮಾರ್ಪಟ್ಟಿದೆ.
ಅಪ್ರಾಪ್ತರ ಮೇಲೆ ಲೈಂಗಿಕ ಪ್ರಕರಣಗಳು ನಡೆದರೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ಅಪರಾಧಿಗೆ ಶಿಕ್ಷೆ ವಿಧಿಸಲಾಗುತ್ತದೆ. ಅದು ತುಂಬಾ ಕಠಿಣವಾದ ಶಿಕ್ಷೆ ಎಂದು ಸುಳ್ಯ ವೃತ ನಿರೀಕ್ಷಕ ನವೀನ್ ಚಂದ್ರ ಜೋಗಿ ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ಕಾನೂನು ಅರಿವು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪೋಕ್ಸೋ ಕಾಯ್ದೆ ಎಂಬ ವಿಷಯದಲ್ಲಿ ಮಾತನಾಡಿ ಹೇಳಿದರು.


ನವಂಬರ್ 7 ರಂದು ಸುಳ್ಯ ಪದವಿ ಪೂರ್ವ ಕಾಲೇಜ್ ಸಭಾಂಗಣದಲ್ಲಿ ಕಾನೂನು ಸೇವೆಗಳ ಸಮಿತಿ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ವಕೀಲರ ಸಂಘ ಸುಳ್ಯ, ಶಿಶು ಮತ್ತು ಮಹಿಳಾ ಅಭಿವೃದ್ಧಿ ಇಲಾಖೆ ಸುಳ್ಯ, ಸುದ್ದಿ ಸಮೂಹ ಮಾಧ್ಯಮ ಸುಳ್ಯ, ಜೂನಿಯರ್ ಕಾಲೇಜ್ ಸುಳ್ಯ ಇದರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿ ವಿದ್ಯಾರ್ಥಿನಿಗಳು ತುಂಬಾ ಎಚ್ಚರಿಕೆಯಿಂದ ಇರಬೇಕಾಗಿದ್ದು ಅವರಲ್ಲಿ ಸ್ವಯಂ ಜಾಗೃತಿ ಮತ್ತು ಆತ್ಮವಿಶ್ವಾಸ ಹೆಚ್ಚಾಗಿ ಅನುಸರಿಸಿಕೊಳ್ಳಬೇಕಾಗಿದೆ ಎಂದು ಹೇಳಿ ಈ ಕಾಯ್ದೆಯ ಬಗ್ಗೆ ಇರುವ ಶಿಕ್ಷೆಗಳ ಪ್ರಮಾಣ ಮತ್ತು ಉತ್ತಮ ಸಮಾಜ ನಿರ್ಮಾಣಗೊಳ್ಳಲು ಪ್ರತಿಯೊಬ್ಬ ನಾಗರಿಕ ವ್ಯಕ್ತಿಯ ಜವಾಬ್ದಾರಿಯನ್ನು ಮಾಹಿತಿ ರೂಪದಲ್ಲಿ ಅವರು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ವಿವರಿಸಿದರು.


ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಪಿ ಮಹದೇವ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಮೋಹನ ಗೌಡ ಬಿಕೆ ವಹಿಸಿದ್ದರು.
ವೇದಿಕೆಯಲ್ಲಿ ಸುಳ್ಯ ವಕೀಲರ ಸಂಘದ ಅಧ್ಯಕ್ಷ ಕೆ ನಾರಾಯಣ, ಎಪಿಪಿ ಅರೋನ್ ಡಿ’ಸೋಜ, ಪ್ಯಾನಲ್ ವಕೀಲರುಗಳಾದ ಪಿ ಭಾಸ್ಕರ್ ರಾವ್, ರಾಮಚಂದ್ರ ಶ್ರೀಪಾದ
ಹೆಗಡೆ ಉಪಸ್ಥಿತರಿದ್ದರು.
ಸುಳ್ಯ ವಕೀಲರ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಜೆ ಎನ್ ಅಬೂಬಕರ್ ಅಡ್ಕಾರ್ ಸ್ವಾಗತಿಸಿ,ನ್ಯಾಯವಾದಿ ರಾಮಚಂದ್ರ ಶ್ರೀಪಾದ ಹೆಗಡೆ ವಂದಿಸಿದರು. ಕಾಲೇಜಿನ ಉಪನ್ಯಾಸಕಿ ಕಾರ್ಯಕ್ರಮ ನಿರೂಪಿಸಿದರು.