ಪೆರಾಜೆ: ಬಿಳಿಯಾರು ಬಳಿಯ ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರ ಚೇತರಿಕೆ

0

ಪೆರಾಜೆ ಬಿಳಿಯಾರು ಬಳಿ ನಡೆದ ಬೈಕ್- ಜೀಪು ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿರುವ ಬೈಕ್ ಸವಾರ ಧನಂಜಯ ಆಲೆಟ್ಟಿ ಯವರು ಆರೋಗ್ಯದಲ್ಲಿ ಅಲ್ಪ ಪ್ರಮಾಣದಲ್ಲಿ ಚೇತರಿಸಿಕೊಳ್ಳುತ್ತಿರುವುದಾಗಿ ತಿಳಿದು ಬಂದಿದೆ. ಗಾಯಗೊಂಡ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಯ ವೈದ್ಯರ ಸಲಹೆಯಂತೆ ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.