ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟ, ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಲು ಕ್ರೀಡಾಕೂಟ ಪೂರಕ – ಸಚಿವ ಎಸ್.ಅಂಗಾರ

0

ದ.ಕ.ಜಿಲ್ಲಾ ಪಂಚಾಯತ್ ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇವರ ಸಹಯೋಗದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕ್ರೀಡಾಕೂಟವು ನ.08 ರಂದು ಕೆ.ಪಿ.ಎಸ್.ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು.


ಮೀನುಗಾರಿಕೆ ,ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರರವರು ಧ್ವಜಾರೋಹಣ ನೆರವೇರಿಸಿ ಬಳಿಕ ಕ್ರೀಡಾ ಜ್ಯೋತಿ ಬೆಳಗಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿ ಕ್ರೀಡಾಕೂಟಕ್ಕೆ ಶುಭಹಾರೈಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಮುಖ್ಯ ಅತಿಥಿಗಳಾಗಿ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ತಾಲೂಕು ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್, ಬೆಂಗಳೂರು ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ಕೆ.ವಿ.ರೇಣುಕಾಪ್ರಸಾದ್, ಪುತ್ತೂರು ಕೋಟಿಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಸ್.ಎನ್.ಮನ್ಮಥ, ಬೆಳ್ಳಾರೆ ಕನ್ಟ್ರಕ್ಷನ್ ಸಿವಿಲ್ ಇಂಜಿನಿಯರ್ ಹಾಜಿ ಕೆ.ಮಹಮ್ಮದ್, ಕಾಲೇಜಿನ ಪ್ರಭಾರ ಪ್ರಾಂಶುಪಾಲ ವಿಶ್ವನಾಥ ಗೌಡ, ಉಪಪ್ರಾಂಶುಪಾಲೆ ಉಮಾಕುಮಾರಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಶ್ರೀನಾಥ ರೈ ಬಾಳಿಲ , ಕ್ಷೇತ್ರ ಸಮನ್ವಯಾಧಿಕಾರಿ ಶೀತಲ್, ದೈಹಿಕ ಶಿಕ್ಷಣ ಶಿಕ್ಷಕಿಯರಾದ ಶ್ರೀಮತಿ ಪಾರ್ವತಿ, ಪುಷ್ಪಾವತಿ, ಮುಖ್ಯಶಿಕ್ಷಕ ಮಾಯಿಲಪ್ಪ ಜಿ, ಇಂಜಿನಿಯರ್ ಮಣಿಕಂಠ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ವೀಣಾ ಎಂ.ಟಿ,ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಅಧ್ಯಕ್ಷ ಶ್ರೀಧರ ಕೆ,ಶಿಕ್ಷಣ ಸಂಯೋಜಕ ಚಂದ್ರಶೇಖರ ಪಿ ಉಪಸ್ಥಿತರಿದ್ದರು.
ಶಿಕ್ಷಕರಿಗೆ ಸನ್ಮಾನ
ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರಾಥಮಿಕ ಶಾಲಾ ಮುಖ್ಯ ಗುರು ಮಾಯಿಲಪ್ಪರವರನ್ನು ಮತ್ತು ಪಂಜ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಯೋಗೀಶ ಚಿದ್ಗಲ್ ರವರನ್ನು ಕ್ರೀಡಾಕೂಟ ಸಂಘಟನಾ ಸಮಿತಿಯಿಂದ ಸನ್ಮಾನಿಸಲಾಯಿತು.
ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ.ಕೆ.ವಿ.ರೇಣುಕಾಪ್ರಸಾದ್ ರವರು ಶಾಲು ಹೊದಿಸಿ, ಫಲ ಪುಷ್ಪ ಸರಣಿಕೆ ನೀಡಿ ಸನ್ಮಾನಿಸಿದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ ಪ್ರಸ್ತಾವಿಕ ಮಾತನಾಡಿದರು.
ಕ್ರೀಡಾಕೂಟ ಸಂಘಟನಾ ಸಮಿತಿ ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್.ರೈ.ಸ್ವಾಗತಿಸಿದರು.
ಕೆ.ಪಿ.ಎಸ್.ನ ವಿದ್ಯಾರ್ಥಿಗಳು ಪ್ರಾರ್ಥಿಸಿ,ಶಿಕ್ಷಕ ರಾಮಚಂದ್ರ ಭಟ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಧನಂಜಯರವರು ಕಾರ್ಯಕ್ರಮ ನಿರೂಪಿಸಿ, ಉಪಪ್ರಾಂಶುಪಾಲರಾದ ಉಮಾಕುಮಾರಿ ವಂದಿಸಿದರು.