ಬೆಳ್ಳಾರೆ : ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟ ಸಮಾರೋಪ

0

ದ.ಕ.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ,ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಸಹಯೋಗದಲ್ಲಿ ನ.08 ಮತ್ತು ನ.09 ರಂದು ಬೆಳ್ಳಾರೆ ಕೆಪಿಎಸ್ ಕ್ರೀಡಾಂಗಣದಲ್ಲಿ ನಡೆಯಿತು.


ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೌರಿ ನೆಟ್ಟಾರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಎಸ್.ಪಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಸ್.ಎನ್.ಮನ್ಮಥ , ನಿವೃತ್ತ ಪ್ರಾಂಶುಪಾಲ ಬಿ.ವಿ.ಸೂರ್ಯನಾರಾಯಣ,ಕ್ರೀಡಾಕೂಟ ಸಂಘಟನಾ ಸಮಿತಿ ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್.ರೈ,ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ಕಾಲೇಜಿನ ಪ್ರಭಾರ ಪ್ರಾಂಶುಪಾಲ ವಿಶ್ವನಾಥ ಗೌಡ ಪಿ,ಉಪಪ್ರಾಂಶುಪಾಲೆ ಉಮಾಕುಮಾರಿ, ಶಾಲಾ ಮುಖ್ಯ ಗುರು ಮಾಯಿಲಪ್ಪ ಜಿ, ಆರ್ಥಿಕ ಸಮಿತಿಯ ಸಂಚಾಲಕ ದಯಾಕರ ಆಳ್ವ, ಸುಳ್ಯ ಸೈಂಟ್ ಬ್ರಿಜಿಡ್ಸ್ ಶಾಲಾ ಸಂಚಾಲಕ ಫಾ.ವಿಕ್ಟರ್ ಡಿ,ಸೋಜಾ, ಮುಖ್ಯೊಪಾಧ್ಯಾಯಿನಿ ಬಿನೋಮಾ , ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ ,ದೈಹಿಕ ಶಿಕ್ಷಣ ಶಿಕ್ಷಕ ಗಣೇಶ್,ಕೃಷ್ಣ ಕುಮಾರ್ ಸವಣೂರು ಉಪಸ್ಥಿತರಿದ್ದರು.

ಸನ್ಮಾನ : ಎರಡು ದಿನ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲು ಸಹಕರಿಸಿದ ಕ್ರೀಡಾಕೂಟ ಸಂಘಟನಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್ .ರೈ. , ಕೆಪಿಎಸ್ ನ ಉಪಪ್ರಾಂಶುಪಾಲೆ ಶ್ರೀಮತಿ ಉಮಾಕುಮಾರಿ, ಪ್ರದೀಪ್ ರೈ ಪನ್ನೆಯವರನ್ನು ಹಾಗೂ ಕ್ರೀಡಾಂಗಣ ನಿರ್ವಹಣಾ ಸಮಿತಿ ಸಂಚಾಲಕ ಜಯರಾಮ ಉಮಿಕ್ಕಳ, ಮಹಾಲಿಂಗ ಬೆಳ್ಳಾರೆ, ಇಂಜಿನಿಯರ್ ಮಣಿಕಂಠರವರನ್ನು, ದೈಹಿಕ ಶಿಕ್ಷಣ ಶಿಕ್ಷಕರಾದ ಹರಿಪ್ರಸಾದ್ ರೈ, ಅನಿಲ್ ರೈ, ವೀರನಾಥ ಕಲ್ಲೋಣಿಯವರನ್ನು ಶಾಲು ಹೊದಿಸಿ ,ಫಲ, ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.


ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಶ್ರೀನಾಥ್ ರೈ ಬಾಳಿಲ ಸ್ವಾಗತಿಸಿ, ಪ್ರದೀಪ್ ರೈ ಪನ್ನೆ ಪ್ರಾಸ್ತಾವಿಕ ಮಾತನಾಡಿ,ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಪುಷ್ಪಾವತಿ ವಂದಿಸಿದರು.