ರೋಟರಿ ಕ್ಲಬ್ ಸುಳ್ಯ ವತಿಯಿಂದ ಸ್ವಸ್ಥ ಸಮಾಜದಲ್ಲಿ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಉಪನ್ಯಾಸ

0


ರೋಟರಿ ಕ್ಲಬ್ ಸುಳ್ಯ ವತಿಯಿಂದ ಸ್ವಸ್ಥ ಸಮಾಜದಲ್ಲಿ ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಮೇಲ್ವಿಚಾರಕಿ ಶೈಲಜಾ ಬಿ ಇವರು ಉಪನ್ಯಾಸ ನೀಡಿ ಮಹಿಳೆ ಹಾಗೂ ಮಕ್ಕಳ ಅಭಿವೃದ್ದಿ ಯ ಬಗ್ಗೆ ಸರಕಾರ ಅನೇಕ ಕಾನೂನು ಕಾಯಿದೆಗಳನ್ನು ತಂದರೂ ಸಮಾಜ ದ ಕೆಲವೊಂದು ವ್ಯಕ್ತಿಗಳು ಸಕಾರಾತ್ಮಕವಾಗಿ ಸ್ಪಂದೀಸುತ್ತಿಲ್ಲವಾದರೂ ಮಹಿಳೆಯರು ಸ್ವಾವಲಂಬಿಗಳಾಗಿ ಬೆಳೆಯುತ್ತಿರುವುದು ಸಂತಸದ ವಿಚಾರ ಎಂದು ತಿಳಿಸಿ
ಇಲಾಖೆಯ ಸಂಪೂರ್ಣ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಂದ್ರಶೇಖರ್ ಪೇರಾಲ್ ಇವರು ವಹಿಸಿದರು. ವೇದಿಕೆಯಲ್ಲಿ ನಿಕಟ ಪೂರ್ವ ಅಧ್ಯಕ್ಷ ಪ್ರಭಾಕರನ್ ನಾಯರ್ , ನಿಯೋಜಿತ ಅಧ್ಯಕ್ಷ ಆನಂದ ಖಂಡಿಗ ಉಪಸ್ತಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಕಾರ್ಯದರ್ಶಿ ಮಧುರಾ ಎಂ ಆರ್ ವಂದಿಸಿದರು.