ಎಲಿಮಲೆ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

0


ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಕನಕದಾಸರ ಜಯಂತಿಯನ್ನು ನ.11ರಂದು ಆಚರಿಸಲಾಯಿತು. “ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೆನಾದರೂ ಬಲ್ಲಿರಾ” ಎನ್ನುವ ಕನಕದಾಸರ ನುಡಿಗಳು ಇಂದಿಗೂ ಪ್ರಸ್ತುತವಾದುದಾಗಿದೆ ಎಂದು ತಿಳಿಸುವುದರೊಂದಿಗೆ ಅವರ ಕೀರ್ತನೆಗಳ ಸಾರವನ್ನು ನಾವಿಂದು ಅರಿಯಬೇಕೆಂದು ಶಿಕ್ಷಕರಾದ ವಿರೂಪಾಕ್ಷಪ್ಪ ರವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ .ಡಿ.ಎಂ.ಸಿ. ಯ ಕಾರ್ಯಾಧ್ಯಕ್ಷ ಜಯಂತ ಹರ್ಲಡ್ಕರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸಂಧ್ಯಾ ಕೆ. ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಹಂಸಿಕ ಮತ್ತು ಕೃತಿ ಹೊನ್ನಾಡಿ ಕನಕದಾಸರ ಕೀರ್ತನೆಗಳನ್ನು ಹಾಡದರು. ಶಿಕ್ಷಕರಾದ ಮುರಳೀಧರ ಪುನುಕುಟ್ಟಿ ಸ್ವಾಗತಿಸಿ, ಸುಂದರ ಕೆ. ವಂದಿಸಿದರು. ವಸಂತ ನಾಯಕ್ ಕಾರ್ಯಕ್ರಮ ನಿರೂಪಿಸಿದರು.