ಚೊಕ್ಕಾಡಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ
ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಬಹುಮಾನ

0

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ವಿಭಾಗದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ವಿದ್ಯಾರ್ಥಿಗಳಾದ 10ನೇ ತರಗತಿಯ ಯಶ್ವಿತ್ ಎಸ್ ಮತ್ತು 9ನೇ ತರಗತಿಯ ಮನ್ವಿತ್ ಎಂ.ಪಿ ದ್ವಿತೀಯ ಬಹುಮಾನ ಪಡೆದಿರುತ್ತಾರೆ. ಮೊಡಂಕಾಪು ಕಾರ್ಮೆಲ್ ಬಾಲಕಿಯರ ಪ್ರೌಢಶಾಲೆಯಲ್ಲಿ ಸ್ಪರ್ಧೆ ಆಯೋಜಿಸಲಾಗಿತ್ತು.


ವಿಜ್ಞಾನ ಶಿಕ್ಷಕಿ ಶ್ರೀಮತಿ ಸಂಧ್ಯಾಕುಮಾರಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುತ್ತಾರೆ.