ಬೆಳ್ಳಾರೆ: ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಪ್ರಣೀತ್ ಗೆ ಹಲವು ಪ್ರಶಸ್ತಿ, ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

0

ಸಾರ್ವಜನಿಕ ಸಾಕ್ಷರತಾ ಇಲಾಖೆ ಹಾಗೂ ಬೆಳ್ಳಾರೆ ಕೆ.ಪಿ.ಎಸ್. ಸಹಕಾರದಲ್ಲಿ ಬೆಳ್ಳಾರೆಯಲ್ಲಿ ನ.8 ಹಾಗೂ 9ರಂದು ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಪ್ರಣೀತ್ ಅವರು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು, ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಏಳನೇ ತರಗತಿ ವಿದ್ಯಾರ್ಥಿಯಾಗಿರುವ ಪ್ರಣೀತ್ ಅವರು ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ, ಉದ್ದ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಈತ ಮಂಡೆಕೋಲು ಗ್ರಾಮದ ಕಲ್ಲಡ್ಕ ದಿ. ಭೋಜಪ್ಪ ನಾಯ್ಕ ಹಾಗೂ ಶ್ರೀಮತಿ ಹೇಮಾವತಿ ದಂಪತಿಗಳ ಪುತ್ರ.
ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ಸ್ವಸ್ತಿಕ್ ಅವರು ಗುಂಡು ಎಸೆತ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.