ಬಾಲ್ ಬ್ಯಾಡ್ಮಿಂಟನ್ : ಶ್ರೀ ಶಾರದಾ ಪಿ.ಯು. ಕಾಲೇಜಿನ ವಿದ್ಯಾರ್ಥಿನಿಯರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆಯುವ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಚಿಕ್ಕಬಳ್ಳಾಪುರದಲ್ಲಿ ನಡೆಯಿತು. ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನದೊಂದಿಗೆ ಜಯಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಯಿತು. ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ತುಳಸಿ ಹಾಗೂ ದ್ವಿತೀಯ ಕಲಾ ವಿಭಾಗದ ಶ್ರೀಫಾ ಭಾಗವಹಿಸಿದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.