ನ.14ರಂದು ಕಟ್ಟಡ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಂದ ಪ್ರತಿಭಟನೆ2022-23ನೇ ಸಾಲಿನ ಶೈಕ್ಷಣಿಕ ಧನಸಹಾಯ ಬಿಡುಗಡೆಗೆ ಒತ್ತಾಯಿಸಿ, ಕಲ್ಯಾಣ ಮಂಡಳಿಯ ವಿನಾಃ ಕಾರಣ ವಿಳಂಬ ಖಂಡಿಸಿ ಹಾಗೂ 2021-22ನೇ ಸಾಲಿನಲ್ಲಿ ಶೈಕ್ಷಣಿಕ ಧನಸಹಾಯ ಬಾಕಿ ಹಣ ಪಾವತಿಗೆ ಒತ್ತಾಯಿಸಿ ಕಟ್ಟಡ ಕಾರ್ಮಿಕರು ಮತ್ತು ವಿದ್ಯಾರ್ಥಿಗಳ ನ.೧೪ರಂದು ಪ್ರತಿಭಟನೆ ನಡೆಯಲಿದೆ. ಸುಳ್ಯ ಎಪಿಎಂಸಿ ಬಳಿ ಇರುವ ಕಾರ್ಮಿಕ ವೃತ್ತ ನೀರಿಕ್ಷಕರ ಉಪ ಕಛೇರಿ ಬಳಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೇಡರೇಶನ್ ವತಿಯಿಂದ ಈ ಪ್ರತಿಭಟನೆ ನಡೆಯಲಿದೆ.

0