ಪ.ಜಾತಿ/ಪ.ವರ್ಗ ಮೆಟ್ರಿಕ್ ನಂತರದ ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಎಸ್‌ಎಸ್‌ಪಿ ಪೋರ್ಟಲ್‌ನಲ್ಲಿ ಆನ್‌ಲೈನ್ ಅರ್ಜಿ ಆಹ್ವಾನ

0

ಪ.ಜಾತಿ/ಪ.ವರ್ಗ ಮೆಟ್ರಿಕ್ ನಂತರದ ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಎಸ್‌ಎಸ್‌ಪಿ ಪೋರ್ಟಲ್‌ನಲ್ಲಿ ಆನ್‌ಲೈನ್ ಅರ್ಜಿ ಆಹ್ವಾನಿಸಿದ್ದು, ೨೦೨೨-೨೩ ನೇ ಸಾಲಿನ ಪರಿಶಿಷ್ಟ ಜಾತಿ/ಪವರ್ಗದ ಮೆಟ್ರಿಕ್ ನಂತರದ ಹಾಗೂ ಮೆಟ್ರಿಕ್ ಪೂರ್ವ (೧ ರಿಂದ ೧೦ನೇ ತರಗತಿ) ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ೨೦೨೨-೨೩ನೇ ಸಾಲಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು, ವಿದ್ಯಾರ್ಥಿಗಳು ಈ ಕೆಳಗೆ ಸೂಚಿಸಿದ ಲಿಂಕ್‌ರಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ದಾಖಲೆಗಳನ್ನು ಆಯಾ ಶಾಲಾ ಮುಖ್ಯೋಪಾಧ್ಯಾಯರು/ಪ್ರಾಂಶುಪಾಲರು ಮುಖಾಂತರ ಸುಳ್ಯ ತಾಲೂಕು ಸಹಾಯಕ ನಿರ್ದೇಶಕರು(ಗ್ರೇಡ್-೨) ಸಮಾಜ ಕಲ್ಯಾಣ ಇಲಾಖಾ ಕಛೇರಿಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ: ಸುಳ್ಯ ತಾಲೂಕು ಸಹಾಯಕ ನಿರ್ದೇಶಕರು(ಗ್ರೇಡ್-೨) ಸಮಾಜ ಕಲ್ಯಾಣ ಇಲಾಖಾ ಕಛೇರಿಯನ್ನು ಸಂಪರ್ಕಿಸಲು ತಿಳಿಸಿದ್ದಾರೆ.

ದೂರವಾಣಿ ಸಂ : 08257-233527,948084316

ವೆಬ್ ಸೈಟ್ : WWW.sw.kar.nic.in

: http://ssp.karnataka.gov.in
https://ssp.post-metric.karnataka.gov.in