ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಮಣಗಿದ ಮೆಟ್ರಿಕ್ ನಂತರದ, ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

0

ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಮಣಗಿದ ಮೆಟ್ರಿಕ್ ನಂತರದ, ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ೨೦೨೨-೨೩ ನೇ ಸಾಲಿನ ಪರಿಶಿಷ್ಟ ಜಾತಿ/ಪ.ವರ್ಗದ ಮೆಟ್ರಿಕ್ ನಂತರದ ಹಾಗೂ ಮೆಟ್ರಿಕ್ ಪೂರ್ವ (೧ ರಿಂದ ೧೦ನೇ ತರಗತಿ) ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಇ-ಆಡಳಿತ ಇಲಾಖೆಯವರು ಅಭಿವೃದ್ಧಿ ಪಡಿಸಿರುವ ಎಸ್‌ಎಸ್‌ಪಿ ಪೋರ್ಟಲ್‌ನಲ್ಲಿ ಡಿಬಿಟಿ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದೆ. ೨೦೨೨-೨೩ನೇ ಸಾಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಎಸ್‌ಎಸ್‌ಪಿಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.