ಸುಳ್ಯ ನ್ಯಾಯಾಲಯದಲ್ಲಿ ಲೋಕ್ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ

0

ಸುಳ್ಯ ನ್ಯಾಯಾಲಯದಲ್ಲಿ ಇಂದು ಸಂಜೆಯವರೆಗೆ ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಹಿರಿಯ ವಕೀಲ ಬಿ . ವೆಂಕಪ್ಪ ಗೌಡ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಸುಳ್ಯ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶೆ ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ಕು. ಅರ್ಪಿತಾ, ಸುಳ್ಯ ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ ನಾರಾಯಣ, ಎಪಿಪಿ ಅರೋನ್ ಡಿ ‘ಸೋಜ ಮೊದಲಾದವರು ಉಪಸ್ಥಿತರಿದ್ದರು.


ನೂರಾರು ಮಂದಿ ಫಲಾನುಭವಿಗಳು ತಮ್ಮತಮ್ಮಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ನ್ಯಾಯಾಲಯದ ಆವರಣದಲ್ಲಿ ಪಾಲ್ಗೊಂಡಿದ್ದರು.


ಲೋಕದಲತ್ ಕಾರ್ಯಕ್ರಮ ಇಂದು ಸಂಜೆಯವರೆಗೆ ನಡೆಯಲಿದ್ದು ಸಣ್ಣಪುಟ್ಟ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಚಿಸುವವರು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ತಿಳಿಸಿದ್ದಾರೆ.