ಕೆವಿಜಿ ಅಮರಜ್ಯೋತಿ ಪದವಿಪೂರ್ವ ಕಾಲೇಜಿನಲ್ಲಿ ಸಹಪಠ್ಯ ಚಟುವಟಿಕೆ ಸ್ಪರ್ಧೆ

0


ಕೆವಿಜಿ ಅಮರಜ್ಯೋತಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವರ್ಲಿ ಪೈಂಟಿಂಗ್,ಸ್ಟೋನ್ ಪೈಂಟಿಂಗ್,ಧಾನ್ಯಗಳಿಂದ ರಂಗೋಲಿ, ಕೊಲಾಜ್ ಮೇಕಿಂಗ್ ಮತ್ತು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು ಮತ್ತು ಅತ್ಯುತ್ತಮ ಕಲಾತ್ಮಕ ಕೃತಿಗಳು ಮೂಡಿಬಂದವು. ವಿದ್ಯಾರ್ಥಿಗಳು ನಾಲ್ಕು ತಂಡಗಳಾಗಿ ಸ್ಪರ್ದೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ತೀರ್ಪುಗಾರರಾಗಿ ಕೆವಿಜಿ ಐಪಿಎಸ್ ಚಿತ್ರಕಲಾ ಶಿಕ್ಷಕರಾದ ಶ್ರೀ ಸುಜಿತ್ ಹಾಗೂ ಶ್ರೀ ಮೆಲ್ವಿನ್ ಪಯಾಸ್ ರವರು ಭಾಗವಹಿಸಿದ್ದರು. ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ ಹಾಗೂ ಕಾಲೇಜಿನ ಸಿ ಇ ಓ ಡಾ. ಉಜ್ವಲ್ ಯು ಜೆ ಯವರು ವಿದ್ಯಾರ್ಥಿಗಳ ಪ್ರತಿಭೆಯನ್ನು ಶ್ಲಾಘಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ ಯಶೋದಾ ರಾಮಚಂದ್ರ,ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.