ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಭಜನೋತ್ಸವ ಉದ್ಘಾಟನೆ

0

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ತಾಲೂಕಿನ ಆಯ್ದ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮವು ನ.13 ರಂದು ಬೆಳಿಗ್ಗೆ ಪ್ರಾರಂಭಗೊಂಡಿತು.
ದೇವಸ್ಥಾನದ ಪ್ರದಾನ ಅರ್ಚಕ ಪದ್ಮನಾಭ ಭಟ್ ದೀಪ ಪ್ರಜ್ವಲನೆ ಮಾಡಿ ಭಜನೋತ್ಸವಕ್ಕೆ ಶುಭಹಾರೈಸಿದರು.
ನಂತರ ಭಜನೆ ಪ್ರಾರಂಭಗೊಂಡಿತು.


ಮದ್ಯಾಹ್ನ ಮಹಾಪೂಜೆ,ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ ಗಂಟೆ 5.59 ಕ್ಕೆ ದೀಪ ವಿಸರ್ಜನೆ,ಮಂಗಳಾರತಿ ,ಪ್ರಸಾದ ವಿತರಣೆ ನಡೆಯಲಿದೆ.
ಸಂಜೆ ಗಂಟೆ 6.00 ಕ್ಕೆ ನಡೆಯುವ ಧರ್ಮಸಭೆಯಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.


ಬಂದರು ಮೀನುಗಾರಿಕೆ,ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಮಡ್ತಿಲ ಸಭಾಧ್ಯಕ್ಷತೆ ವಹಿಸಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ಭಜನಾ ಪರಿಷತ್ ರಾಜ್ಯಾಧ್ಯಕ್ಷ ಬಾಲಕೃಷ್ಣ ಪುತ್ಯ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಬಾಲಕೃಷ್ಣ ಪುತ್ಯ ಉಪಸ್ಥಿತರಿರುವರು ಎಂದು ಭಜನೋತ್ಸವ ಸಂಯೋಜಕರಾದ ಲಕ್ಷ್ಮಿನಾರಾಯಣ ಖಂಡಿಗೆಮೂಲೆ ತಿಳಿಸಿದ್ದಾರೆ.