ಪಂಜ : ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

0

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ವಸತಿ ಶಾಲೆಗಳ 2022-23 ಸಾಲಿನ ಕ್ರೀಡಾಕೂಟವು ನ. 7 ರಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಲ್ನಾಡು ಪುತ್ತೂರು ಇಲ್ಲಿ ನಡೆಯಿತು. ಈ ಕ್ರೀಡಾಕೂಟದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪಂಜ ಇಲ್ಲಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ತ್ರೋಬಾಲ್‌ನಲ್ಲಿ ದ್ವಿತೀಯ, ರಿಲೇ ದ್ವಿತೀಯ, ಗುಂಡು ಎಸೆತ ದ್ವಿತೀಯ, ಪ್ರಾಥಮಿಕ ವಿಭಾಗದ 100 ಮೀ ಪ್ರಥಮ, 200 ಮೀ ಪ್ರಥಮ, ರಿಲೇ ದ್ವಿತೀಯ ಬಹುಮಾನವನ್ನು ಪಡೆದು ಮೈಸೂರಿನ ಚಾಮುಂಡೇಶ್ವರಿ ಕ್ರೀಡಾಂಗಣದಲ್ಲಿ ನಡೆಯುವ ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.