ತೊಡಿಕಾನ ದೇವಾಲಯದಲ್ಲಿ ಧನುಪೂಜೆಯ ಆಮಂತ್ರಣ ಬಿಡುಗಡೆ

0


ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದಲ್ಲಿ ವರ್ಷಂಪ್ರತಿ ನಡೆಯುವಂತೆ ಈ ವರ್ಷವೂ ಧನುಪೂಜಾ ಕಾರ್ಯಕ್ರಮ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ನ. ೧೨ರಂದು ತೊಡಿಕಾನ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.


ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಸಹಕಾರಿ ಸಂಘದ ಅಧ್ಯಕ್ಷರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು, ದೇವಳದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.