ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿಯವರಿಗೆ ಸಹಕಾರ ರತ್ನ ಪ್ರಶಸ್ತಿ

0


ಸುಳ್ಯದ ಹಿರಿಯ ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿಯವರಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲವು ಸಹಕಾರ ರತ್ನ ಪ್ರಶಸ್ತಿಯನ್ನು ಘೋಷಿಸಿದೆ.


ಕರ್ನಾಟಕ ರಾಜ್ಯದ ಸಹಕಾರ ಚಳುವಳಿಯ ಬೆಳವಣಿಗೆಗೆ ನಿತ್ಯಾನಂದ ಮುಂಡೋಡಿಯವರು ಸಲ್ಲಿಸಿರುವ ಅನುಪಮ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ನ. ೧೮ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿಯನ್ನು ಪ್ರದಾನಗೈದು ಗೌರವಿಸಲಾಗುವುದೆಂದು ಸಹಕಾರ ಮಹಾಮಂಡಲದ ಪ್ರಕಟಣೆ ತಿಳಿಸಿದೆ.


ನಿತ್ಯಾನಂದ ಮುಂಡೋಡಿಯವರು ಗುತ್ತಿಗಾರು ರಬ್ಬರ್ ಬೆಳೆಗಾರರ ಸಂಸ್ಕರಣಾ ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಹಾಗೂ ಸುಳ್ಯದ ಟಿಎಪಿಸಿಎಂಎಸ್‌ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ, ಮಾಸ್ ಉಪಾಧ್ಯಕ್ಷರಾಗಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ನಿತ್ಯಾನಂದ ಮುಂಡೋಡಿಯವರು, ವೆಂಕಟರಮಣ ಸೊಸೈಟಿ ಮತ್ತು ಮಾಸ್ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ 11 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದ ಇವರು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.