ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢ ಶಾಲೆಗೆ ತಂಡ ಪ್ರಶಸ್ತಿ

0


ಬೆಳ್ಳಾರೆಯಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢಶಾಲೆಯ 8ನೇ ತರಗತಿಯ 14 ವರ್ಷದೊಳಗಿನ ವಿಭಾಗದ ಹಾಗೂ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ತಂಡ ಪ್ರಶಸ್ತಿ ಹಾಗೂ ಹಲವು ವಿದ್ಯಾರ್ಥಿಗಳು ಪ್ರಶಸ್ತಿ ಗಳಿಸಿದ್ದಾರೆ.

ವಿದ್ಯಾ ಸಂಸ್ಥೆಯ ಸಂಚಾಲಕರಾದ ರೇ. ಫಾ. ವಿಕ್ಟರ್ ಡಿಸೋಜಾ, ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಬಿನೋಮರ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ ಹಾಗೂ ಪುಷ್ಪವೇಣಿ ತರಬೇತಿ ನೀಡಿದ್ದರು. ತಂಡದ ವ್ಯವಸ್ಥಾಪಕರಾಗಿ ಶಿಕ್ಷಕಿಯರಾದ ಕಲಾವತಿ, ಉಷಾದೇವಿ ಸಹಕರಿಸಿದರು.