ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರಾಥಮಿಕ ಶಾಲೆಗೆ ತಂಡ ಪ್ರಶಸ್ತಿ

0

ಬೆಳ್ಳಾರೆಯಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ತಂಡ ಪ್ರಶಸ್ತಿ ಹಾಗೂ ಹಲವು ವಿದ್ಯಾರ್ಥಿಗಳು ಪ್ರಶಸ್ತಿ ಗಳಿಸಿರುತ್ತಾರೆ. ವಿದ್ಯಾ ಸಂಸ್ಥೆಯ ಸಂಚಾಲಕರಾದ ರೇ. ಫಾ. ವಿಕ್ಟರ್ ಡಿಸೋಜಾ, ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಬಿನೋಮರ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಣ ಶಿಕ್ಷಕರಾದ ಪುಷ್ಪವೇಣಿ ಹಾಗೂ ಕೊರಗಪ್ಪ ಬೆಳ್ಳಾರೆ ತರಬೇತಿ ನೀಡಿ, ತಂಡದ ವ್ಯವಸ್ಥಾಪಕರಾಗಿ ಶಿಕ್ಷಕಿಯರಾದ ಭವ್ಯ ಹಾಗೂ ಹೇಮಾವತಿ ಸಹಕರಿಸಿದರು.