ಅಡ್ಕಾರು: ವಿ.ಹಿಂ.ಪ. ಭಜರಂಗದಳ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಧನಸಹಾಯ ವಿತರಣೆ

0

ವಿಶ್ವ ಹಿಂದೂ ಪರಿಷತ್ ಭಜರಂಗದಳ, ಶ್ರೀ ಸ್ಕಂದ ಶಾಖೆ ಅಡ್ಕಾರು ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರಿಗೆ ಧನಸಹಾಯವನ್ನು ವಿತರಿಸಲಾಯಿತು.


ವಿಶ್ವ ಹಿಂದೂ ಪರಿಷತ್ ಭಜರಂಗದಳ ಶ್ರೀ ಸ್ಕಂದ ಶಾಖೆ ಅಡ್ಕಾರು ಇದರ ಸಹಯೋಗದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವವರ ಚಿಕಿತ್ಸಾ ಸಹಾಯಾರ್ಥವಾಗಿ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವಠಾರದಲ್ಲಿ ಅ.30ರಂದು ಹಿಂದೂ ಬಾಂಧವರ ವಾಲಿಬಾಲ್ ಪಂದ್ಯಾಟ ನಡೆಸಲಾಗಿತ್ತು.


ಇದರಲ್ಲಿ ಸಂಗ್ರಹವಾದ ಮೊತ್ತವನ್ನು ಜಾಲ್ಸೂರು ಗ್ರಾಮದ ಕೋನಡ್ಕಪದವು ಅಚ್ಚುತಪಾಟಾಳಿ ಹಾಗೂ ಜಾಲ್ಸೂರಿನ ತಿಮ್ಮಯ್ಯ ಆಚಾರಿ ಅವರಿಗೆ ವಿತರಿಸಲಾಯಿತು.


ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶ್ರೀ ಸ್ಕಂದ ಶಾಖೆ ಅಡ್ಕಾರು ಪದಾಧಿಕಾರಿಗಳು ಉಪಸ್ಥಿತರಿದ್ದರು.