ಅರಂತೋಡಿನಲ್ಲಿ ಅಮೃತ್ ಶಾಲಾ ಸೌಲಭ್ಯ ಯೋಜನೆಯ ನೂತನ ಕೊಠಡಿ ಉದ್ಘಾಟನಾ ಸಮಾರಂಭ

0


ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಮತ್ತು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಸಹಯೋಗದಲ್ಲಿ ಆಮೃತ್ ಶಾಲಾ ಸೌಲಭ್ಯ ಯೋಜನೆಯಲ್ಲಿ ನಿರ್ಮಿಸಿದ ನೂತನ ಕೊಠಡಿ ಉದ್ಘಾಟನಾ ಸಮಾರಂಭ ನ.14 ರಂದು ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು .

ನೂತನ ಕೊಠಡಿಯನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಸುಳ್ಯ ಶಾಸಕರಾದ ಎಸ್ ಅಂಗಾರ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ ದೇರಾಜೆ ವಹಿಸಿದರು.

ಅರಂತೋಡು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಕು.ಶ್ವೇತಾ ಆರಮನೆಗಾಯ,ಸುಳ್ಯ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಎನ್,ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹದೇವ ಎಸ್.ಪಿ.,ಜಿಲ್ಲಾ ಪಂಚಾಯತ್ ಇಂಜಿನಿಯರ್ ಹನುಮಂತರಾಯ, ಸುಳ್ಯ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಶೀತಲ್ ಯು.ಕೆ.,ಅರಂತೋಡು ಗ್ರಾಮ ಪಂಚಾಯತ್ ಸದಸ್ಯ ರಾದ ಕೆ.ಎಲ್.ಶಿವಾನಂದ,ಪುಷ್ಪಾಧರ,ಮಾಲಿನಿ ,ಸುಳ್ಯ ಶಿಕ್ಷಣ ಸಂಯೋಜಕ ಚಂದ್ರಶೇಖರ್ ಪಿ, ಅರಂತೋಡು ಸಿ.ಆರ್.ಪಿ.ಸಮೂಹ ಸಂಪನ್ಮೂಲ ವ್ಯಕ್ತಿ ಮಹೇಶ ವಿ ,ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು . ಶಾಲಾ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ಬನ ಸ್ವಾಗತಿಸಿ ಶಿಕ್ಷಕಿ ರೇಶ್ಮಾ ಕಾರ್ಯಕ್ರಮ ನಿರೂಪಿಸಿದರು.