ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನ ; ಆಮಂತ್ರಣ ಪತ್ರ ಬಿಡುಗಡೆ

0


ದ.10 ರಂದು ಗೂನಡ್ಕದ ಸಜ್ಜನ ಸಭಾಂಗಣದಲ್ಲಿ ನಡೆಯಲಿರುವ ಸುಳ್ಯ ತಾಲೂಕು 26 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರವನ್ನು ನ.13 ರಂದು ಸಜ್ಜನ ಸಭಾಂಗಣದಲ್ಲಿ ನಡೆದ ಸ್ವಾಗತ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು.


ಕ‌‌.ಸಾ.ಪ‌. ಅಧ್ಯಕ್ಷ ಚಂದ್ರಶೇಖರ ಪೇರಾಲು, ಸ್ವಾಗತ ಸಮಿತಿ ಅಧ್ಯಕ್ಷ ಡಾ. ಉಮ್ಮರ್ ಬೀಜದಕಟ್ಟೆ, ಕಾರ್ಯದರ್ಶಿ ದಾಮೋದರ ಮಾಸ್ತರ್ ಬೈಲೆ, ವಿವಿಧ ಸಮಿತಿಗಳ ಸಂಚಾಲಕರು, ಸದಸ್ಯರು, ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ನಿರ್ದೇಶಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಮ್ಮೇಳನದ ಪ್ರಚಾರಾರ್ಥವಾಗಿ ಕ್ಯಾಪ್ ನ್ನು ಬಿಡುಗಡೆ ಮಾಡಲಾಯಿತು.