ಬಾಳಿಲದಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ, ಮಕ್ಕಳ ಪ್ರತಿಭಾ ಪ್ರದರ್ಶನದ ವೇದಿಕೆ : ನೂರಾರು ವಿದ್ಯಾರ್ಥಿಗಳು ಭಾಗಿ

0

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಮತ್ತು ವಿದ್ಯಾಬೋಧಿನೀ ವಿದ್ಯಾ ಸಂಸ್ಥೆಗಳು ಬಾಳಿಲ ಇದರ ಸಹಯೋಗದಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ 2022 ನ. 14 ಮತ್ತು 15 ರಂದು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ನಡೆಯಲಿದ್ದು, ನ. 14 ರಂದು ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಬಾಳಿಲ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸವಿತಾ ಗುರುರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೆರಾಲು, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಬಾಳಿಲ ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿ ಅಧ್ಯಕ್ಷ ವೆಂಕಟರಮಣ ಭಟ್ ಎನ್, ಕಾಂಚೂಡು ಶ್ರೀ ಮಂಜುನಾಥೇಶ್ವರ ದೇವಾಲಯದ ಆಡಳಿತ ಧರ್ಮದರ್ಶಿ ಕೆ. ಪರಮೇಶ್ವರಯ್ಯ, ತಾ.ಪಂ. ಬೆಳ್ಳಾರೆ ಕ್ಷೇತ್ರದ ನಿಕಟಪೋರ್ವ ಜಿ. ಪಂ. ಸದಸ್ಯ ಎಸ್.ಎನ್ ಮನ್ಮಥ, ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ಎಸ್‌.ಡಿ.ಎಂ.ಸಿ ಅಧ್ಯಕ್ಷ ಧನಂಜಯ ಶೆಟ್ಟಿ ಗೌರವ ಉಪಸ್ಥಿತರಾಗಿ ವೇದಿಕೆಯಲ್ಲಿದ್ದರು. ಪ್ರತಿಭಾ ಕಾರಂಜಿ 2022 ನೋಡೆಲ್ ಅಧಿಕಾರಿಗಳಾದ ವಸಂತ ಎನೆಕಲ್ ಮತ್ತು ಚಂದ್ರಶೇಖರ ಪಿ, ಬಾಳಿಲ ವಿದ್ಯಾಬೋಧಿನೀ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಪಿ.ಜಿ.ಎಸ್.ಎನ್. ಪ್ರಸಾದ್, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಎಸ್‌.ಪಿ, ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್ ಮೂಡಿತಾಯ, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್, ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಪೃಥ್ವಿ ಕುಮಾರ್, ಗ್ರೇಡ್ ಒನ್ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಗಣೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಸಂಘಟಕ ಕುಶಾಲಪ್ಪ, ತುಂಬತ್ತಾಜೆ, ಮತ್ತು ವಿದ್ಯಾಬೋಧಿನೀ ಪ್ರೌಢಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶಿವಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಮತ್ತು ನಾಡಗೀತೆ ಹಾಡಿದರು. ಶಾಲಾ ಮುಖ್ಯ ಶಿಕ್ಷಕ ಯಶೋಧರ ಎಂ ಸ್ವಾಗತಿಸಿ ಸುಳ್ಯ ಸಮನ್ವಯಾಧಿಕಾರಿ ಶ್ರೀಮತಿ ಶೀತಲ್ ಯು.ಕೆ ವಂದಿಸಿದರು.

ಸಹ ಶಿಕ್ಷಕ ಉದಯಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾಮಟ್ಟದಲ್ಲಿ ಸುಳ್ಯ ತಾಲೂಕನ್ನು ಪ್ರತಿನಿಧಿಸಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಪಟುಗಳಿಗೆ ಸಮವಸ್ತ್ರಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಈ ಬಗ್ಗೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ ಪ್ರಸ್ತಾವನೆಗೈದರು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸ್ಪರ್ಧೆಗಳು ನಡೆಯಿತು.