ಅರಂತೋಡು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

0
ಅರಂತೋಡು ಅಂಗನವಾಡಿ ಕೇಂದ್ರದಲ್ಲಿ ನ.14 ರಂದು ಮಕ್ಕಳ ದಿನಾಚರಣೆೆಯನ್ನು ಆಚರಿಸಲಾಯಿತು. ಅಂಗನವಾಡಿ ಕೇಂದ್ರದ ಮಕ್ಕಳಿಗೆ ವಿವಿಧ ಆಟೋಟ ಸ್ವರ್ದೆಗಳನ್ನು ಏರ್ಪಡಿಸಲಾಯಿತು. 
ವಿಜೇತರಾದ ಪುಟಾಣಿಗಳಿಗೆ ಅಂಗನವಾಡಿ ಬಾಲ ವಿಕಾಸ ಸಮಿತಿಯ ಸದಸ್ಯ ಹಾಗೂ ಅರಂತೋಡು ಗ್ರಾಮಪಂಚಾಯತ್ ನ ಮಾಜಿ ಉಪಾಧ್ಯಕ್ಷ ಅಶ್ರಫ್ ಗುಂಡಿ ಬಹುಮಾನವನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಶ್ರೀಲತಾ ಶಿವರಾಮ, ರೋಹಿಣಿ, ಅಂಗನವಾಡಿ ಸಹಾಯಕಿ ಜಾನಕಿ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಹೊನ್ನಮ್ಮ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.