ಸಹಕಾರಿ ಸಪ್ತಾಹದ ಅಂಗವಾಗಿ ಮಡಪ್ಪಾಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಧ್ವಜಾರೋಹಣ

0

ಮಡಪ್ಪಾಡಿ ಪ್ರಾ.ಕೃ.ಪ. ಸಹಕಾರಿ ಸಂಘದಲ್ಲಿ ನ.13 ರಂದು 69 ನೇ ಅಖಿಲ ಭಾರತೀಯ ಸಹಕಾರ ಸಪ್ತಾಹ 2022 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಆ ಪ್ರಯುಕ್ತ ಮಡಪ್ಪಾಡಿ ಕೃ.ಪ. ಸಹಕಾರಿ ಸಂಘದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ,
ಸಂಘದ ಉಪಾಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ, ನಿರ್ದೇಶಕರಾದ ಸೋಮಶೇಖರ ಕೇವಳ, ಪ್ರಭಾಕರ ಕೇವಳ, ರಾಜಕುಮಾರ ಪೂಂಬಾಡಿ, ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಂಗಯ್ಯ ಪೂಂಬಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.