ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

0

ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿಮಕ್ಕಳ ದಿನಾಚರಣೆನ್ನು ಆಚರಿಸಲಾಯಿತು. ಸಭಾಧ್ಯಕ್ಷತೆಯನ್ನು ವಂ. ಫಾ. ವಿಕ್ಟರ್ ಡಿಸೋಜಾ ವಹಿಸಿದ್ದರು . ವೇದಿಕೆಯಲ್ಲಿ ಪ್ರೌಢಶಾಲಾ ಪೋಷಕ ಸಮಿತಿಯ ಅಧ್ಯಕ್ಷ ಹರೀಶ್ ರಾವ್, ಪ್ರಾಥಮಿಕ ಶಾಲಾ ಪೋಷಕ ಸಮಿತಿಯ ಅಧ್ಯಕ್ಷ ದುರ್ಗಾ ಪ್ರಸಾದ್, ಹಾಗೂ ಪೂರ್ವ ಪ್ರಾಥಮಿಕ ಶಾಲಾ ಪೋಷಕ ಸಮಿತಿಯ ಅಧ್ಯಕ್ಷೆ ಡಾ. ಅನುರಾಧ ಕುರುಂಜಿ, ಶಾಲಾ ಮುಖ್ಯ ಶಿಕ್ಷಕಿ ಸಿ। ಬಿನೋಮ ಮತ್ತು ಪ್ರೌಢಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಇಂಚರ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಶಾರಿಕ ರವರು ಉಪಸ್ಥಿತರಿದ್ದರು.

ಶಾಲಾ ಶಿಕ್ಷಕ ವೃಂದ ದಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸಹ ಶಿಕ್ಷಕಿ ಶ್ರೀಮತಿ ಸೂಚಾ ಸಾಜುರವರು ಮಕ್ಕಳ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು .ಶೈಕ್ಷಣಿಕ ಸಾಧನೆಯನ್ನು ಮಾಡಿದ, ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕರು ಬಹುಮಾನವನ್ನು ವಿತರಿಸಿದರು. ಸಹ ಶಿಕ್ಷಕಿ ಶ್ರೀಮತಿ ಚೇತನ ರವರು ಸ್ವಾಗತಿಸಿ, ಸಹ ಶಿಕ್ಷಕಿ ಶ್ರೀಮತಿ ಪ್ರೆಸ್ಸಿಲ್ಲ ಪಿಂಟೊರವರು ವಂದಿಸಿದರು

. ಸಹ ಶಿಕ್ಷಕಿ ಶ್ರೀಮತಿ ಕಲಾವತಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಹ ಶಿಕ್ಷಕಿಯರಾದ ಶ್ರೀಮತಿ ಆಶಾ, ಶ್ರೀಮತಿ ಪ್ರೆಸ್ಸಿಲ್ಲ, ಶ್ರೀಮತಿ ಚೇತನರವರು ಕಾರ್ಯಕ್ರಮಕ್ಕೆ ಸಹಕರಿಸಿದರು .ಕಾರ್ಯಕ್ರಮದ ಕೊನೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕರು ಮಕ್ಕಳ ದಿನಾಚರಣೆ ಅಂಗವಾಗಿ ಐಸ್ ಕ್ರೀಮ್ ವಿತರಿಸಿದರು.