ಮಡಪ್ಪಾಡಿ : ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ” ಹಾಗೂ ವಿಶೇಷ ಮಹಿಳಾ ಗ್ರಾಮ ಸಭೆ

0

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯೊಂದಿಗೆ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಲು ” ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ” ಹಾಗೂ ವಿಶೇಷ ಮಹಿಳಾ ಗ್ರಾಮ ಸಭೆಯನ್ನು ನ.15ರಂದು ನಡೆಸಲಾಯಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಉಷಾ ಜಯರಾಮ ಪಿ.ಸಿ. ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕರು, ಆರೋಗ್ಯ ಸಹಾಯಕಿ, ಸುಳ್ಯ ತಾಲೂಕು ಪಂಚಾಯತ್ ನ MGNREGA ಯೋಜನೆಯ IEC ಸಂಯೋಜಕರು , ಅಕ್ಷಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇದರ ಅಧ್ಯಕ್ಷರು, ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.