ಹರಿಹರ ಪಲ್ಲತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

0

ಹರಿಹರ ಪಲ್ಲತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ನ.14 ರಂದು ಆಚರಿಸಲಾಯಿತು. ಬಾಲ ವಿಕಾಸ ಸಮಿತಿಯ ಅಧ್ಯಕ್ಷ ರಾದ ಶ್ರೀಮತಿ ಲತಾ ಹಿಮ್ಮತ್ ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ತಾರಾಮಲ್ಲಾರ ಕಾಯ೯ಕ್ರಮ ಉದ್ಘಾಟಿಸಿ ಮಕ್ಕಳಿಗೆ ಶುಭ ಹಾರೈಸಿದರು.

ಆರೋಗ್ಯ ಸಮುದಾಯ ಆಧಿಕಾರಿ ರೇಣುಕಾ, ಆಶಾ ಕಾರ್ಯಕರ್ತೆ ಶ್ರೀಮತಿ ಪುಪ್ಪಾವತಿ, ಮಕ್ಕಳ ಪೋಷಕರು, ಅಂಗನವಾಡಿ ಪುಟಾಣಿ ಮಕ್ಕಳು ಹಾಗೂ ಅಂಗನವಾಡಿ ಸಹಾಯಕಿ ಪವಿತ್ರ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಕಾರ್ಯಕ್ರಮ ಹರಿಣಿ ಕಾರ್ಯಕ್ರಮ ನಿರ್ವಹಿಸಿದರು. ವಿವಿಧ ಸ್ಪರ್ಧೆ ಏರ್ಪಡಿಸಲಾಗಿದ್ದು ಶ್ರೀಮತಿ ತಾರ ಮಲ್ಲಾರ ಬಹುಮಾನ ಪ್ರಾಯೋಜಿಸಿದರು.