ಕನಕಮಜಲು: ಸುಣ್ಣಮೂಲೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

0

ಕನಕಮಜಲು ಗ್ರಾಮದ ಸುಣ್ಣಮೂಲೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ನ.15ರಂದು ನಡೆಸಲಾಯಿತು ‌.
ಅಂಗನವಾಡಿ ಕೇಂದ್ರದ ಪುಟಾಣಿ ಮಕ್ಕಳು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಗುವಿನ ಪೋಷಕಿ ಶ್ರೀಮತಿ ಹಸೀನಾ ರಹೀಂ ಅವರು ಅಧ್ಯಕ್ಷತೆ ವಹಿಸಿದ್ದರು.

ಕನಕಮಜಲು ಗ್ರಾ.ಪಂ. ಸದಸ್ಯ ಇಬ್ರಾಹಿಂ ಕಾಸಿಂ, ಅಂಗನವಾಡಿ ಬಾಲವಿಕಾಸ ಸಮಿತಿ ಸದಸ್ಯ ಅಬ್ದುಲ್ ಮಜೀದ್, ಹಸನ್ ಗೌಸಿಯ ಸುಣ್ಣಮೂಲೆ, ಇಲ್ಯಾಸ್ ಸುಣ್ಣಮೂಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿಅಂಗನವಾಡಿ ಕೇಂದ್ರದ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ, ಬಹುಮಾನ ವಿತರಿಸಲಾಯಿತು. ಬಳಿಕ ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರ ಮಕ್ಕಳ ಪೋಷಕರು, ಸ್ರ್ರೀಶಕ್ತಿ ಸಂಘದ ಸದಸ್ಯರು, ಅಂಗನವಾಡಿ ಸಹಾಯಕಿ ಶ್ರೀಮತಿ ಜಯಂತಿ ಉಪಸ್ಥಿತರಿದ್ದರು. ಹಸನ್ ಗೌಸಿಯಾ ಸುಣ್ಣಮೂಲೆ ಬಹುಮಾನದ ಪ್ರಾಯೋಜಕರಾಗಿ ಸಹಕರಿಸಿದರು. ಗ್ರಾ.ಪಂ. ಸದಸ್ಯ ಇಬ್ರಾಹಿಂ ಕಾಸಿಂ‌ ಮತ್ತು ಬಾಲಚಂದ್ರ ಕಾರಿಂಜ, ಶ್ರೀಮತಿ ನೆಸಿಮಾ ಅವರು ಸಿಹಿತಿಂಡಿ ಹಾಗೂ ತಂಪುಪಾನಿಯ ನೀಡಿ ಸಹಕರಿಸಿದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವನಜಾ ಕಾರ್ಯಕ್ರಮ ನಿರೂಪಿಸಿದರು.