ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆ

0

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮವು ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ 14 ರಂದು ನಡೆಯಿತು.
ಬೆಳ್ಳಾರೆ ಗ್ರಾ. ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ ದೀಪ ಬೆಳಗಿಸಿ ಉದ್ಘಾಟಿಸಿ, ಗ್ರಂಥಾಲಯವು ಒಂದು ಜ್ಞಾನದ ದೇಗುಲ ತಮ್ಮ ಭವಿಷ್ಯ ರೂಪಿಸಲು ಗ್ರಂಥಾಲಯಕ್ಕೆ ಬಂದು ಅದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಮಕ್ಕಳ ಛದ್ಮವೇಷ ಸ್ಪರ್ಧೆ ನಡೆಯಿತು.

ಈ ಸ್ಪರ್ಧೆಯ ನಿರ್ಣಾಯಕರಾಗಿ ಕೃಷ್ಣಪ್ಪ ಬಂಬಿಲ ನಿರ್ವಹಿಸಿದರು. ಈ ಕಾರ್ಯಕ್ರಮಕ್ಕೆ ಪಂಚಾಯತ್ ಸದಸ್ಯರಾದ ಶ್ರೀಮತಿ ವೀಣಾ, ಶ್ರೀಮತಿ ಸುಶೀಲಾ ಲೆಕ್ಕ ಸಹಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮಕ್ಕಳು ಮತ್ತು ಮಕ್ಕಳ‌ ತಾಯಂದಿರು , ಆಶಾ ಕಾರ್ಯಕರ್ತೆ ಹಾಗೂ
ಪಂಚಾಯತ್ ಸಿಬ್ಬಂದಿಯವರು ಉಪಸ್ಥಿತರಿದ್ದರು.


ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ ಸ್ವಾಗತಿಸಿ , ವಂದಿಸಿದರು.