ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಧನಂಜಯ ಅಡ್ಪಂಗಾಯರಿಂದ ಅರ್ಜಿ ಸಲ್ಲಿಕೆ

0

2023 ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಆಕಾಂಕ್ಷೆ ಉಳ್ಳವರು ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸುವಂತೆ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚಿಸಿದ್ದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಬಯಸಿ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯರವರು ಅರ್ಜಿ ಹಾಕಿರುತ್ತಾರೆ.