ಬೆಳ್ಳಾರೆ ಗ್ರಾಮ ಪಂಚಾಯತ್ ಮಹಿಳಾ ವಿಶೇಷ ಗ್ರಾಮ ಸಭೆ

0

ಬೆಳ್ಳಾರೆ ಗ್ರಾಮ ಪಂಚಾಯತ್ ಮಹಿಳಾ ವಿಶೇಷ ಗ್ರಾಮ ಸಭೆಯು ನ.16 ರಂದು ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಉಷಾ ವಲಯ ಮೇಲ್ವಿಚಾರಕರು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ಳಾರೆ ವಲಯ ಭಾಗವಹಿಸಿ ಸ್ವ ಉದ್ಯೋಗ, ಸಮಾಜದ ಮುಖ್ಯ ವಾಹಿನಿಯಲ್ಲಿ ಮಹಿಳೆಯರ ಕುರಿತಾಗಿ ಮಾಹಿತಿ ನೀಡಿದರು, ನರೇಗಾ ಯೋಜನೆಯ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ಉಪಾಧ್ಯಕ್ಷೆ ಶ್ರೀಮತಿ ಗೌರಿ ನೆಟ್ಟಾರು, ಪಂಚಾಯತ್ ಸದಸ್ಯರಾದ ಅನಿಲ್ ರೈ ಚಾವಡಿಬಾಗಿಲು, ಎನ್ ಎಸ್ ಡಿ ವಿಠಲ್ ದಾಸ್, ಜಯಶ್ರೀ, ಮೋಹಿನಿ ಕೆ ಟಿ, ನಮಿತಾ ಕೆ ಎಲ್ ರೈ, ವೀಣಾ, ಶ್ರೀ ಶಕ್ತಿ ಗೊಂಚಲು ಸಮಿತಿ ಅಧ್ಯಕ್ಷರು ಶ್ರೀಮತಿ ಸುಜಾತ ,ಪೂರ್ಣಿಮಾ, ಉಪಸ್ಥಿತರಿದ್ದರು,
ಸಸ್ತ್ರೀ ಶಕ್ತಿ ಸ್ವಸಹಾಯ ಸಂಜೀವಿನಿ ಸಂಘಗಳ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಗ್ರಾಮಸ್ಥರು ಭಾಗವಹಿಸಿದ್ದರು.