ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿ ಬ್ರಹ್ಮರಥೋತ್ಸವಕ್ಕೆ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಗೆ ಅಹ್ವಾನ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಟಿ ಮಹೋತ್ಸವಕ್ಕೆ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರನ್ನು ಅಹ್ವಾನಿಸಲಾಗಿದೆ.

ಇಂದು ಮುಖ್ಯಮಂತ್ರಿ ಅವರನ್ನು ಸಚಿವ ಎಸ್ ಅಂಗಾರ ಅವರ ನೇತೃತ್ವದಲ್ಲಿ ಭೇಟಿ ಮಾಡಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಮಹೋತ್ಸವ ಆಮಂತ್ರಣ ನೀಡಿ ಆಮಂತ್ರಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ಸಳ್ಳಿ, ಸದಸ್ಯರುಗಳಾದ ಪ್ರಸನ್ನ ದರ್ಬೆ, ಮನೋಹರ ರೈ, ಮಾಸ್ಟರ್‌ ಪ್ಲಾನ್ ಸದಸ್ಯರಾದ ಕಿಶೋರ್ ಕುಮಾರ್ ಕೂಜುಗೋಡು, ಚಂದ್ರಶೇಖರ ನಲ್ಲೂರಾಯ, ಮನೋಜ್ ಸುಬ್ರಹ್ಮಣ್ಯ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಉಪಸ್ಥಿತರಿದ್ದರು.