ನ.19 : ಪೆರುವಾಜೆಯಲ್ಲಿ ತಹಶೀಲ್ದಾರ್ ಗ್ರಾಮ ವಾಸ್ತವ್ಯ – ಸಮಾಲೋಚನಾ ಸಭೆ

0

ತಹಶೀಲ್ದಾರ್ ಅವರ ಗ್ರಾಮ ವಾಸ್ತವ್ಯ ಸಮಾಲೋಚನೆ ಸಭೆ ನ.16 ರಂದು ಪೆರುವಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ತಹಶೀಲ್ದಾರ್ ಕು. ಅನಿತಾ ಲಕ್ಷ್ಮಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಪೆರುವಾಜೆಯಲ್ಲಿ ನ.19 ರಂದು ಗ್ರಾಮ ವಾಸ್ತವ್ಯ ಮಾಡುವುದೆಂದು ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಚಂದ್ರಾವತಿ, ಸದಸ್ಯರಾದ ಸಚಿನ್ ರಾಜ್ ಶೆಟ್ಟಿ, ಮಾಧವ ಮುಂಡಾಜೆ, ಶ್ರೀಮತಿ ರೇವತಿ, ಶ್ರೀಮತಿ ಗುಲಾಬಿ ಉಪಸ್ಥಿತರಿದ್ದರು.


ಉಪತಹಶೀಲ್ದಾರ್ ಚಂದ್ರಕಾಂತ ಕಾರ್ಯಕ್ರಮ ನಿರೂಪಿಸಿದರು. ಕಂದಾಯ ನಿರೀಕ್ಷಕರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.