ಇಂದು ಸಂಜೆ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಕುರಿತು ಪೂರ್ವಭಾವಿ ಸಭೆ

0

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಕುರಿತು ಪೂರ್ವಭಾವಿ ಸಭೆಯು ನ.18ರಂದು ಸಂಜೆ 7:00 ಕ್ಕೆ ದೇವಾಲಯದ ಕಾರ್ತಿಕೇಯ ಸಭಾಭವನದಲ್ಲಿ ಜರುಗಲಿದೆ.

ಈ ಸಭೆಗೆ ದೇವಾಲಯದ ವ್ಯವಸ್ಥಾಪನ ಸಮಿತಿ ಜೀರ್ಣೋದ್ಧಾರ ಸಮಿತಿ ಉತ್ಸವ ಸಮಿತಿಯ ಹಾಗೂ ವಿವಿಧ ಬೈಲುವಾರು ಸಮಿತಿಯ ಸಂಚಾಲಕರು ಸಹ ಸಂಚಾಲಕರು ಮತ್ತು ಸದಸ್ಯರು ಹಾಗ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು ಅವರು ತಿಳಿಸಿದ್ದಾರೆ.