ಪಡ್ಪಿನಂಗಡಿ : ಯುವತಿ ಮೃತ್ಯು

0


ಐವತ್ತೊಕ್ಲು ಗ್ರಾಮದ ಪಡ್ಪಿನಂಗಡಿ ಸಮೀಪದ ಜನತಾ ಕಾಲೋನಿ ನಿವಾಸಿ ಉಮೇಶ ಮತ್ತು ಶ್ರೀಮತಿ ಪದ್ಮಾವತಿ ದಂಪತಿಗಳ ಪುತ್ರಿ ಕು.ಸುಪ್ರಿತಾ ಎಂಬವರು ನ.15 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ 19 ವರುಷ ವಯಸ್ಸಾಗಿತ್ತು.ಅವರು ನಿಂತಿಕಲ್ಲು ನಲ್ಲಿ ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದರು.ನ.14 ರಂದು ಮನೆಯಲ್ಲಿ ಒಮ್ಮಿಂದೊಮ್ಮೆಲೆ ಅನಾರೋಗ್ಯಕ್ಕೆ ಒಳಗಾಗಿ ಅವರನ್ನು ಮೊದಲು ಸುಳ್ಯದ ಆಸ್ಪತ್ರೆಗೆ ದಾಖಲಿಸಿ , ಬಳಿಕ ಹೆಚ್ಚಿನ ಚಿಕಿತ್ಸೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು ಎಂದು ಮನೆಯವರು ತಿಳಿಸಿದ್ದಾರೆ.


ಮೃತರು ಅವಿವಾಹಿತರಾಗಿದ್ದು, ತಂದೆ, ತಾಯಿ, ಸಹೋದರ ಸುಮಾಂತ್ , ಸಹೋದರಿ ರಶ್ಮಿ , ಕುಟುಂಬಸ್ಥರು,ಬಂಧುಮಿತ್ರರನ್ನು ಅಗಲಿದ್ದಾರೆ.