ಕನಕಮಜಲು: ವಿಶೇಷ ಮಹಿಳಾ ಗ್ರಾಮಸಭೆ ಹಾಗೂ ಆಯುಷ್ಮಾನ್ ಕಾರ್ಡ್ ಉಚಿತ ನೋಂದಣಿ

0

ಕನಕಮಜಲು ಗ್ರಾಮ ಪಂಚಾಯತಿ ವತಿಯಿಂದ ಮಹಿಳಾ ಸಬಲೀಕರಣ ಅಭಿಯಾನ ಹಾಗೂ ವಿಶೇಷ ಗ್ರಾಮಸಭೆ ಮತ್ತು ಆಯುಷ್ಮಾನ್ ಭಾರತ್ ಕಾರ್ಡ್ ಉಚಿತ ನೋಂದಣಿ ಕಾರ್ಯಕ್ರಮವು ಕನಕಮಜಲು ಗ್ರಾಮ ಪಂಚಾಯತಿ ಸಭಾಭವನದಲ್ಲಿ ನ.18ರಂದು ಜರುಗಿತು.

ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ ಅವರು ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಶೈಲಜಾ ಅವರು ನೋಡೆಲ್ ಅಧಿಕಾರಿಯಾಗಿ ಉಪಸ್ಥಿತರಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೀಳ ಅವರು ಮಾತನಾಡಿ ಆಯುಷ್ಮಾನ್ ಕಾರ್ಡ್ ನೋಂದಣಿ ಮಾಡಿಸುವುದರಿಂದ ಜನರಿಗೆ ಸಿಗುವ ಸವಲತ್ತುಗಳ ಕುರಿತು ವಿವರಿಸಿದರು. ಅರೋಗ್ಯ ಇಲಾಖೆಯ ಸೌಲಭ್ಯಗಳು ಹಾಗೂ ಆರೋಗ್ಯ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾಹಿತಿ ನೀಡಿ, ಇತ್ತೀಚೆಗೆ ವ್ಯಾಪಕವಾಗಿ ಹರಡುತ್ತಿರುವ ಕೆಂಗಣ್ಣು ರೋಗದ ಕುರಿತು ಮುನ್ನೆಚ್ಚರಿಕಾ ಕ್ರಮದ ಕುರಿತು ಮಾಹಿತಿ ನೀಡಿದರು. ತಾ.ಪಂ. ಸಿಬ್ಬಂದಿ ನಮಿತ ಅವರು ನರೇಗಾ ಯೋಜನೆಯಲ್ಲಿ ಮಹಿಳೆಯರ ತೊಡಗಿಸುವಿಕೆಯ ಕುರಿತು ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಶ್ರೀಮತಿ ದೇವಕಿ ಕುದ್ಕುಳಿ, ಸದಸ್ಯರುಗಳಾದ ಇಬ್ರಾಹಿಂ ಕಾಸಿಂ ಕನಕಮಜಲು, ಶ್ರೀಮತಿ ಶಾರದಾ ಉಗ್ಗಮೂಲೆ, ಶ್ರೀಮತಿ ಸುಮಿತ್ರ ಕುತ್ಯಾಳ, ಶ್ರೀಮತಿ ಪ್ರೇಮಲತಾ ಪಂಜಿಗುಂಡಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.


ಕನಕಮಜಲು ಗ್ರಾಮ ಪಂಚಾಯತಿ, ಜಾಲ್ಸೂರು ಹಾಗೂ ಅರಂತೋಡು ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಇವುಗಳ ಜಂಟಿ ಆಶ್ರಯದಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್ ಉಚಿತ ನೋಂದಣಿ ಕಾರ್ಯಕ್ರಮವು ಜರುಗಿದ್ದು, ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಂಡರು.