ಸುಬ್ರಹ್ಮಣ್ಯದಲ್ಲಿ ಶಿಕ್ಷಕರ ಸಮಾವೇಶ, ಚೇತರಿಕೆ 2022-23

0

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು, ತಾಲೂಕು ಸಮಿತಿ ಸುಳ್ಯ ಮತ್ತು ಕಡಬ, ಶಿಕ್ಷಕರ ಸಮಾವೇಶ ಮತ್ತು ಶೈಕ್ಷಣಿಕ ಕಾರ್ಯಗಾರ ಸಮಿತಿ ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೊಳಪಟ್ಟ ಸರಕಾರಿ ಮತ್ತು ಅನುದಾನಿತ ಶಾಲಾ ಶಿಕ್ಷಕರ ಸಮಾವೇಶ ಮತ್ತು ಶೈಕ್ಷಣಿಕ ಕಾರ್ಯಾಗಾರ ಚೇತರಿಕೆ 2022-23 ನ. 18 ಸುಬ್ರಹ್ಮಣ್ಯದ ವಲ್ಲೀಶ ಸಭಾ ಭವನದಲ್ಲಿ ನಡೆಯಿತು.
ಪೂರ್ವಾಹ್ನ ಶೈಕ್ಷಣಿಕ ಕಾರ್ಯಾಗಾರವನ್ನು ಸಮಗ್ರ ಶಿಕ್ಷಣ ಕರ್ನಾಟಕ ಜಂಟಿ ನಿರ್ದೇಶಕರಾದ ವೈ. ಶಿವರಾಮಯ್ಯ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಪಿ. ಮಹಾದೇವ ವಹಿಸಿದ್ದರು. ಶಿಕ್ಷಣ ಸಚಿವರ ವಿಶೇಷ ಅಧಿಕಾರಿ ಡಾ. ಹೆಚ್.ಪಿ. ಚಂದ್ರಶೇಖರ್ ರಾಷ್ಟ್ರೀಯ ಹೊಸ ಶಿಕ್ಷಣ ನೀತಿ ಮತ್ತು ಪಠ್ಯಕ್ರಮದ ಬಗ್ಗೆ ಶಿಖರೋಪನ್ಯಾಸ ಮಾಡಿದರು.


ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಆರ್. ಲೋಕೆಶ್, ಸುಬ್ರಹ್ಮಣ್ಯ ಎಸ್.ಎಸ್.ಪಿ.ಯು. ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ ನಾಯಕ್, ಸುಳ್ಯ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಶ್ರೀಮತಿ ಶೀತಲ್ ಯು.ಕೆ, ಪುತ್ತೂರು ಅಕ್ಷರ ದಾಸೋಹ ನಿರ್ದೇಶಕರಾದ ವಿಷ್ಣುಪ್ರಸಾದ್, ಸುಳ್ಯ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಶ್ರೀಮತಿ ವೀಣಾ, ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಪೃಥ್ವಿ ಕುಮಾರ್ ಟಿ ಸಮಾವೇಶ ಸಮಿತಿ ಸಂಚಾಲಕರು ಹಾಗೂ ಸಂಘದ ಕಡಬ ತಾಲೂಕು ಸಮಿತಿ ಅಧ್ಯಕ್ಷ ರಾಮಕೃಷ್ಣ ಮಲ್ಲಾರ, ಕೆ, ಕಾರ್ಯದರ್ಶಿ ಜಿ. ಮಾಯಿಲಪ್ಪ, ಜೊತೆ ಕಾರ್ಯದರ್ಶಿ ಕುಶಾಲಪ್ಪ ಟಿ, ಖಜಾಂಚಿ ತೇಜಪ್ಪ ಎಸ್, ಸುಳ್ಯ ತಾಲೂಕು ಕಾರ್ಯದರ್ಶಿ ಪದ್ಮನಾಭ ಅತ್ಯಾಡಿ, ಸದಸ್ಯರಾದ ಹೇಮಲತಾ, ಜಯಂತಿ ಬಿ.ಎಂ, ಸರೋಜಿನಿ ಕೆ, ಕುಶಾಲಪ್ಪ ಪಿ, ಅಂಬಿಕ, ಲೀಲಾವತಿ ಕೆ.ಎನ್, ಜನಾರ್ಧನ ಗೌಡ, ಅರುಣ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ವರ್ಷಾ ಬೇಕಲ್ ಪ್ರಾರ್ಥಸಿದರು.
ಸಮಿತಿ ಸಹ ಸಂಚಾಲಕ ಶ್ರೀಧರ ಗೌಡ ಸ್ವಾಗತಿಸಿದರು. ಕಡಬ ತಾಲೂಕು ಕಾರ್ಯದರ್ಶಿ ಬಾಲಕೃಷ್ಣ ಕೆ ಕಾರ್ಯಕ್ರಮ ನಿರೂಪಿಸಿದರು. ಅತಿಥಿಗಳನ್ನು ರಾಮಕುಂಜದ ಮಹಿಳಾ ಸಿಂಗಾರಿಮೇಳದ ವತಿಯಿಂದ ಸ್ವಾಗತಿಸಲಾಯಿತು.

ಬಳಿಕ ನಡೆದ ಶಿಕ್ಷಕರ ಸಮಾವೇಶದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಸರಕಾರದ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕರಾದ ಕೆ. ಸೀತಾರಾಮ ರೈ ಸವಣೂರು, ರಾಜ್ಯ ಪ್ರಾ.ಶಾ. ಶಿಕ್ಷಕರ ಸಂಘದ ನಿಕಟಪೂರ್ವಾಧ್ಯಕ್ಷ ಎ.ಎಂ. ನಾರಾಯಣ ಸ್ವಾಮಿ, ರಾಜ್ಯ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ, ಸುಬ್ರಹ್ಮಣ್ಯ ರೊಟರಿ ಕ್ಲಬ್ ಅಧ್ಯಕ್ಷ ಗೋಪಾಲ್ ಎಣ್ಣೆಮಜಲು, ಸರಕಾರಿ ನೌರರರ ಸುಳ್ಯ ತಾಲೂಕು ಅಧ್ಯಕ್ಷ ತೀರ್ಥರಾಮ, ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ವಿಮಲ್ ಕುಮಾರ್ ಮತ್ತು ಸಮಿತಿಯ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿರು ನಾಡಗೀತೆಯನ್ನು ಹಾಡಿದರು. ಸಮಿತಿ ಸಂಚಾಲಕ ರಾಮಕೃಷ್ಣ ಮಲ್ಲಾರ ಸ್ವಾಗತಿಸಿದರು. ಶಿಕ್ಷಕಿಯರಾದ ಶ್ರೀಮತಿ ಆಶಾ ಮತ್ತು ಶ್ರೀಮತಿ ಮಮತಾ ಕಾರ್ಯಕ್ರಮ ನಿರೂಪಿಸಿದರು.