ಗೂನಡ್ಕ : ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಗೌರವ

0

ಸಂಪಾಜೆ ಗ್ರಾಮದ ಗೂನಡ್ಕ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ನಡೆದ ಸಂಪಾಜೆ ಗ್ರಾಮ ಪಂಚಾಯತ್ ಹಾಗೂ ತೆಕ್ಕಿಲ್, ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಮಕ್ಕಳ ಸಾಂಸ್ಕೃತಿಕ ಹಬ್ಬದಲ್ಲಿ ಪ್ರಥಮ ಬಹುಮಾನ ಹಾಗೂ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಗೌರವ ಸಮರ್ಪಣೆ ನ.17 ರಂದು ಏರ್ಪಡಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಸಂಚಾಲಕರಾದ ಲೋಕನಾಥ ಎಸ್ ಪಿ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಸಂಪಾಜೆ ಹಾಗೂ ಅರಂತೋಡು ವಲಯದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಸುಧೀರ್ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯರಾದ ಯು ಎಸ್ ಚಿದಾನಂದ ಸರ್ ಇವರು ಭಾಗವಹಿಸಿದ್ದರು.


ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಜಿ ರಾಮಚಂದ್ರ ಕಲ್ಲಗದ್ದೆ, ವಿ ಎಸ್ ಎಸ್ ಬ್ಯಾಂಕಿನ ಉಪಾಧ್ಯಕ್ಷರಾದ ಜಿ ಮಹಮ್ಮದ್ ಕುಂಞಿ, ಅಲ್ ಅಮೀನ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾದ ಜಾಫರ್ ಸಾಧಿಕ್, ಮತ್ತು ಹಾಜಿ ಅಬ್ದುಲ್ಲ, ಪಿ ಎ ಗಣಪತಿ ಭಟ್ ಪಿ ಎನ್ ಕೋಶಾಧಿಕಾರಿಗಳು ಶಾರದಾ ವಿದ್ಯಾ ಸಂಘ ಗೂನಡ್ಕ, ಮಹಿಳಾ ಸದಸ್ಯೆ ಶ್ರೀಮತಿ ಲಕ್ಷ್ಮಿಜಿ ಡಿ, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಆಶಾವಿನಯ್ ರವರು ಉಪಸಿತರಿದ್ದರು, ಆಲ್ ಅಮೀನ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಶಾಲೆಗೆ ಗೌರವ ಶಿಕ್ಷಕರ ವೇತನಕ್ಕೆ 25,000/ರೂ ಮೊತ್ತವನ್ನು ನೂತನ ಅಧ್ಯಕ್ಷರಾದ ಜಾಫರ್ ಸಾಧಿಕ್ ಅವರು ಆಡಳಿತ ಮಂಡಳಿ ಅಧ್ಯಕ್ಷರಾದ ಜಿ ರಾಮಚಂದ್ರ ಕಲ್ಲಗದ್ದೆ ಇವರಿಗೆ ಹಸ್ತಾಂತರಿಸಿದರು. ಮಕ್ಕಳ ಸಾಂಸ್ಕೃತಿಕ ಹಬ್ಬದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ಪೋಷಕರು ವಿದ್ಯಾಭಿಮಾನಿಗಳು ಎಸ್ ಡಿ ಎಂ ಸಿ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು, ಶಾಲಾ ಮುಖೋಪಾಧ್ಯಾಯರಾದ ಜಿ. ಹನುಮಂತಪ್ಪ ಸರ್ ಇವರು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮ ನಿರೂಪಣೆಯನ್ನು ಶ್ರೀಮತಿ ಭವಿತ ಕೆ ಪಿ. ನಿರ್ವಹಿಸಿದರು. ಶಾಲಾ ಆಡಳಿತ ಮಂಡಳಿಯ ಕೋಶಾಧಿಕಾರಿ ಗಣಪತಿ ಭಟ್ ರವರ ಧನ್ಯವಾದಗೈದರು.