ರೋಟರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಅನನ್ಯ ಕೆ. ಬಿ. ರಾಜ್ಯ ಮಟ್ಟಕ್ಕೆಆಯ್ಕೆ

0

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ ಕಛೇರಿ ( ಆಡಳಿತ) ದಕ್ಷಿಣ ಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು, ದಕ್ಷಿಣ ವಲಯ, ಇವರ ಸಹಯೋಗದಲ್ಲಿ, ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಬಾಲಕ ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟ 2020-23, ಪ್ರೌಢ ವಿಭಾಗದ ಹರ್ಡ್ ಲ್ಸ್ ನಲ್ಲಿ ರೋಟರಿ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಅನನ್ಯ ಕೆ ಬಿ ಭಾಗವಹಿಸಿ, ದ್ವಿತೀಯ ಸ್ಥಾನ ಗಳಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಮಂಜುನಾಥ ಎ. ಯವರು ತರಬೇತಿ ನೀಡಿರುತ್ತಾರೆ.
ಇವರು ಭವಾನಿ ಶಂಕರ K.R ಹಾಗೂ ಕುಸುಮಾ ದಂಪತಿಗಳ ಪುತ್ರಿ.