ನ.19 : ಐವರ್ನಾಡಿನಲ್ಲಿ “ಊರ್ವಶಿ ಶಾಪ” ತಾಳಮದ್ದಳೆ

0

ಐವರ್ನಾಡು ಗ್ರಾಮ ಪಂಚಾಯತ್ ವಠಾರದಲ್ಲಿ ಶ್ರೀ ಶಾರದಾಂಬಾ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಪಂಜ ಇದರ ಆಶ್ರಯದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಮತ್ತು ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಯೋಗದಲ್ಲಿ ನ.19 ರಂದು ಸಂಜೆ 5.00 ಗಂಟೆಗೆ ಸಹಕಾರಿ ಸಂಘದ ವಠಾರದಲ್ಲಿ ತಾಳಮದ್ದಲೆ ಪ್ರಸಂಗ “ ಊರ್ವಶಿ ಶಾಪ ” ನಡೆಯಲಿದೆ.
ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ದೀಪ ಪ್ರಜ್ವಲನೆ ಮಾಡಲಿದ್ದಾರೆ.
ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ರವರು ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಲಿದ್ದಾರೆ.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್, ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ ಅತಿಥಿಗಳಾಗಿ ಉಪಸ್ಥಿತರಿರುವರು.
ದೈವ ನರ್ತಕ ಜನಾರ್ಧನ ಅಜಿಲ ಪರ್ಲಿಕಜೆ ಇವರನ್ನು ಸನ್ಮಾನಿಸಲಾಗುವುದು.
ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿ ತಾಳಮದ್ದಲೆಯನ್ನು ವೀಕ್ಷಿಸಬೇಕೆಂದು ಸಂಘಟಕರು ತಿಳಿಸಿದ್ದಾರೆ.