ಸುಳ್ಯ ಎನ್.ಎಂ.ಸಿ. ಸಮಾಜಕಾರ್ಯ ವಿಭಾಗದಲ್ಲಿ ಅತಿಥಿ ಉಪನ್ಯಾಸ

0

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಸಮಾಜಕಾರ್ಯ ವಿಭಾಗದ ಸಮಾಜ ಕಾರ್ಯ ಸಂಘದ ವತಿಯಿಂದ ಸಮಾಜ ಕಾರ್ಯದಲ್ಲಿ ವೃತ್ತಿ ವ್ಯಾಪ್ತಿ ಎಂಬ ವಿಚಾರದಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ನ. 17ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರುದ್ರಕುಮಾರ್ ಎಂ.ಎಂ. ವಹಿಸಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕೆವಿಜಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಶಿವಪ್ರಸಾದ್ ಕೆ ವಿದ್ಯಾರ್ಥಿಗಳಿಗೆ ಪ್ರಸ್ತುತ ಸಮಾಜದಲ್ಲಿ, ಸಮಾಜ ಕಾರ್ಯ ಕ್ಷೇತ್ರದಲ್ಲಿ ಮಾಡಬಹುದಾದ ವೃತ್ತಿಗಳ ಅವಕಾಶಗಳಿ ಮತ್ತು ಅವುಗಳಿಗೆ ಯಾವ ರೀತಿಯಾದ ಪೂರಕ ತಯಾರಿಯನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿಕೊಟ್ಟರು. ವೇದಿಕೆಯಲ್ಲಿ ಸಮಾಜ ಕಾರ್ಯ ಸಂಘದ ಸಂಯೋಜಕರಾದ ಶೋಭಾ ಎ ಉಪಸ್ಥಿತರಿದ್ದರು.

ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಕೃಪಾ ಎ.ಎನ್ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಮಾಜ ಕಾರ್ಯ ಸಂಘದ ವಿದ್ಯಾರ್ಥಿ ಪ್ರತಿನಿಧಿ ನಿಶಾಂತ್ ಎ.ಡಿ ವಂದಿಸಿದರು. ಕೃತಿ ಕೆ.ಎಚ್ ಕಾರ್ಯಕ್ರಮವನ್ನು ನಿರೂಪಿಸಿದರು. ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಂಡರು.